ಅಭಿನಂದನ್ ವರ್ಧಮಾನ್ ಗೆ ‘ವೀರ ಚಕ್ರ ಪ್ರಶಸ್ತಿ’ – ರಾಷ್ಟ್ರಪತಿಯವರಿಂದ ಪ್ರಶಸ್ತಿ ಪ್ರದಾನ…

66
firstsuddi

ನವದೆಹಲಿ : ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಷ್ಠಿತ ‘ವೀರ ಚಕ್ರ ಪ್ರಶಸ್ತಿ’ ಪ್ರದಾನ ಮಾಡಿದ್ದಾರೆ.

ಫೆಬ್ರವರಿ 27, 2019 ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ಅಭಿನಂದನ್ ವರ್ಧಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಪಾಕಿಸ್ತಾನದ ಎಫ್ -16 ಅನ್ನು ಹೊಡೆದುರುಳಿಸಿದ ನಂತರ ವರ್ಧಮಾನ್ ಅವರ ಮಿಗ್-21 ಯುದ್ಧ ವಿಮಾನ ಪಾಕ್ ಭೂಪ್ರದೇಶದಲ್ಲಿ ಇಳಿದಾಗ ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ತೆಗೆದುಕೊಂಡಿತು. ಈ ಬಗ್ಗೆ ಅಂತರರಾಷ್ಟ್ರೀಯ ಹಸ್ತಕ್ಷೇಪದ ಜೊತೆಗೆ ಭಾರತದ ಕಡೆಯಿಂದ ಹೇರಿದ ವ್ಯಾಪಕ ಒತ್ತಡದಿಂದಾಗಿ ಪಾಕಿಸ್ತಾನದ ಸೇನೆಯು ಅವರನ್ನು ಬಿಡುಗಡೆ ಮಾಡಿತು.