ಅಮರನಾಥ ಬಳಿಕ ಇದೀಗ ಕೇದಾರನಾಥ ಯಾತ್ರೆ ಸ್ಥಗಿತ…

45
firstsuddi

ಕೇದಾರನಾಥ : ಅಮರನಾಥ ಗುಹೆಯ ಬಳಿ ದಿಢೀರ್ ಮೇಘ ಸ್ಫೋಟದ ಪರಿಣಾಮವಾಗಿ ಭಾರೀ ಸಾವು-ನೋವುಗಳು ಸಂಭವಿಸಿರುವ ಹಿನ್ನಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಸೋನಪ್ರಯಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಹಾಗೂ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಅಮರನಾಥ ಪವಿತ್ರ ಗುಹೆಯ ಬಳಿ ಹಠಾತ್ ಮೇಘ ಸ್ಫೋಟದಿಂದಾಗಿ 16 ಮಂದಿ ಪ್ರಾಣ ಕಳೆದಿಕೊಂಡಿದ್ದು, ಹಲವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಠಾತ್ ಪ್ರವಾಹದ ನಂತರ ಅಲ್ಲಿ ಸಿಲುಕಿದ್ದ 15 ಸಾವಿರ ಯಾತ್ರಿಕರನ್ನು ಪಂಜತರ್ನಿಯ ಕೆಳ ಬೇಸ್ ಕ್ಯಾಂಪ್ ಗೆ ಸ್ಥಳಾಂತರಿಸಲಾಗಿದೆ.

ಜಮ್ಮು ಹಾಗೂ ಕಾಶ್ಮೀರದ ಆಡಳಿತಾಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಜೊತೆಗೆ ಸಂಪರ್ಕದಲ್ಲಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ತ್ವರಿತಗತಿಯ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸುಧಾರಿತ ಲಘು ಹೆಲಿಕಾಪ್ಟರ್ ಗಳ ಮೂಲಕ ಯಾತ್ರಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಕರೆತರುತ್ತಿದೆ.

ದುರಂತದ ನಂತರ ಜೂನ್ 30 ರಂದು ಪ್ರಾರಂಭವಾದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ಅದನ್ನು ಪುನಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.