ಅಮಿತ್ ಶಾ, ವಿ. ಸೋಮಣ್ಣ ವಿರುದ್ಧ ದೂರು ದಾಖಲು…

91
firstsuddi

ಬೆಂಗಳೂರು: ಬಿಜೆಪಿ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್ ನಾಯಕರು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿ. ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ನಾಮಪತ್ರ ಹಿಂಪಡೆಯುವಂತೆ ಆಮಿಷವೊಡ್ಡಿರುವ ವಿಚಾರ ಹಾಗೂ ಚುನಾವಣೆ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ವಿ. ಸೋಮಣ್ಣ, ಅಮಿತ್ ಶಾ ವಿರುದ್ಧ ರಣದೀಪ್ ಸಿಂಗ್ ಸುರ್ಜೆವಾಲಾ, ಡಿ.ಕೆ. ಶಿವಕುಮಾರ್ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ಸೃಷ್ಟಿಯಾಗಲಿವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಕಾಂಗ್ರೆಸ್ ಗೆ ವೋಟ್ ಮಾಡಬೇಡಿ ಎಂದು ಹೇಳುವ ಮೂಲಕ ಮತದಾರರನ್ನು ಹೆದರಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇವೆ. ಎಫ್ಐಆರ್ ದಾಖಲಿಸಿ ಸೂಕ್ತ ತನಿಖೆ ಕೈಗೊಳ್ಳಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.