ಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆ…

65
firstsuddi

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಹಾಗೂ ಜೆಡಿಎಸ್ ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಭೇಟಿ ನೀಡಿದ ಹೊರಟ್ಟಿ, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶೀಘ್ರದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಿಮ್ಮಂಥಹವರು ಪಕ್ಷಕ್ಕೆ ಬರಬೇಕು ಅಂತಾ ಅಮಿತ್ ಶಾ ಹೇಳಿದರು ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇದ್ದರು.