ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ…

47
firstsuddi

ಛತ್ತೀಸ್‍ಗಢ: ಪಂಜಾಬ್‍ನ ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಎರಡು ದಿನಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಇದಾಗಿದೆ.

ಮೇ 6ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪವಿರುವ ಹೆರಿಟೇಜ್ ಸ್ಟ್ರೀಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ತೊಂದರೆಯಾಗಿಲ್ಲ. ಜೊತೆಗೆ ಯಾವುದಕ್ಕೂ ಹಾನಿ ಸಂಭವಿಸಿಲ್ಲ. ಸ್ಫೋಟಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಫೋರೆನ್ಸಿಕ್ ತಂಡಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ತನಿಖೆಗಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದು, ಈ ಎರಡು ಸ್ಫೋಟಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಶನಿವಾರ ನಡೆದಿದ್ದ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳದಲ್ಲಿ ಲೋಹದ ತುಂಡುಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ ಮತ್ತು ಸುಧಾರಿತ ಸ್ಫೋಟಕ ಸಾಧನಕ್ಕೆ ಪೊಟ್ಯಾಸಿಯಮ್ ನೈಟ್ರೇಟ್ ಮತ್ತು ಸಲ್ಫರ್ ಬಳಸಲಾಗಿದೆ ಎಂದು ಶಂಕಿಸಲಾಗಿದೆ.