ಬೆಂಗಳೂರು : ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಪಿಎಸ್ಐ ಅಭ್ಯರ್ಥಿಗಳಿಂದ ಹಣ ಪಡೆದು ಅಕ್ರಮಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಅಮೃತ್ ಪಾಲ್ ಅವರನ್ನು ಸಿಐಡಿ ಬಂಧಿಸಿತ್ತು. ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಸಿಐಡಿ ಪೊಲೀಸರು 1,406 ಪುಟಗಳ ಹೆಚ್ಚುವರಿ ಚಾರ್ಜ್ಶೀಟ್ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸುಮಾರು 1.30 ಕೋಟಿ ಹಣ ಪಡೆದು ಸಿಐಡಿ ಪ್ರಧಾನ ಕಚೇರಿಯ ಸ್ಟ್ರಾಂಗ್ ರೂಮ್ ನಲ್ಲಿ ಉತ್ತರ ಪತ್ರಿಕೆಗಳನ್ನು ತಿದ್ದಲು ಸಹಕರಿಸಿದ್ದಾರೆ ಎಂಬ ಆರೋಪ ಪಾಲ್ ಮೇಲಿದೆ.










