ಅಮೆರಿಕದ ಸರ್ಜನ್ ಜನರಲ್ ಹುದ್ದೆಗೆ ಭಾರತೀಯ ಮೂಲದ ಡಾ. ವಿವೇಕ್ ಮೂರ್ತಿ ನೇಮಕ…

108
Firstsuddi

ವಾಷಿಂಗ್ಟನ್ : ಅಮೆರಿಕದ ಸೆನೆಟ್ ನಲ್ಲಿ 57-43 ಮತಗಳನ್ನು ಪಡೆಯುವ ಮೂಲಕ ಸರ್ಜನ್ ಜನರಲ್ ಹುದ್ದೆಗೆ ಆಯ್ಕೆಯಾಗಿದ್ದು, ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಭಾರತೀಯ ಅಮೆರಿಕನ್ ವೈದ್ಯ ಡಾ.ವಿವೇಕ್ ಮೂರ್ತಿ ಅವರನ್ನು ಅಮೆರಿಕದ ಮುಂದಿನ ಸರ್ಜನ್ ಜನರಲ್ ಹುದ್ದೆಗೆ ನೇಮಕ ಮಾಡಿದ್ದಾರೆ. ಡಾ. ಮೂರ್ತಿಯವರು ಎರಡನೇ ಬಾರಿಗೆ ಅಮೆರಿಕದ ಸರ್ಜನ್ ಜನರಲ್ ಆಗಿ ನೇಮಕಗೊಳ್ಳುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯ ಡಾ.ವಿವೇಕ್ ಮೂರ್ತಿ ಅವರು ಸರ್ಜನ್ ಜನರಲ್ ಆಗಿ ಮತ್ತೊಮ್ಮೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಸೆನೆಟ್‍ಗೆ ತುಂಬಾ ಕೃತಜ್ಞನಾಗಿದ್ದೇನೆ. ನಮ್ಮ ರಾಷ್ಟ್ರವನ್ನು ಗುಣಪಡಿಸಲು ಮತ್ತು ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ಸಹಾಯ ಮಾಡಲು ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.