ಅಮೆರಿಕಾ ಆದ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಪಾಸಿಟಿವ್…

133
firstsuddi

ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ಬಗ್ಗೆ ಇಂದು ಮುಂಜಾನೆ ಟ್ರಂಪ್ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. “ ನನಗೆ ಮತ್ತು ಮೆಲಾನಿಯಾಗೆ ಕೊರೊನಾ ಪಾಸಿಟಿವ್ ಬಂದಿದೆ. ನಾವಿಬ್ಬರೂ ಕ್ವಾರಂಟೈನ್‍ನಲ್ಲಿದ್ದೇವೆ. ವೈದ್ಯಕೀಯ ವರದಿಗಾಗಿ ಕಾಯುತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ