ವಾಷಿಂಗ್ಟನ್ : ವರ್ಣಬೇಧ ನೀತಿ ವಿರುದ್ಧ ಅಮೇರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಇದಕ್ಕೆ ಪೂರಕವೆಂಬಂತೆ ಅಮೇರಿಕಾದ ವಾಷಿಂಗ್ಟನ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗಿನ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕೆಲವು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಸ್(45) ಸಾವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವವರೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಅಮೇರಿಕಾದ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.










