ಅಮ್ರೀನ್ ಭಟ್ ಹತ್ಯೆಗೈದಿದ್ದ ಇಬ್ಬರು ಎಲ್ಇಟಿ ಉಗ್ರರು ಹತ…

69
firstsuddi

ಶ್ರೀನಗರ : ಶ್ರೀನಗರದ ಸೌರಾ ಪ್ರದೇಶದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರು ಹತರಾಗಿದ್ದಾರೆ.

ಎಲ್ ಇಟಿ ಭಯೋತ್ಪಾದಕರನ್ನು ಶಾಕಿರ್ ಅಹ್ಮದ್ ವಾಜಾ ಮತ್ತು ಅಫ್ರೀನ್ ಅಫ್ತಾಬ್ ಮಲಿಕ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಕಿರುತೆರೆ ನಟಿ ಅಮ್ರೀನ್ ಭಟ್ ಹತ್ಯೆಯಲ್ಲಿ ಅವರು ಭಾಗಿಯಾಗಿದ್ದರು. ಅವಂತಿಪೋರಾ ಎನ್ ಕೌಂಟರ್ ನಲ್ಲಿ ಟಿವಿ ಕಲಾವಿದೆ ಅಮ್ರೀನ್ ಭಟ್ ಹತ್ಯೆಗೈದ ಇಬ್ಬರು ಎಲ್ಇಟಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕರು ಬದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಟಿಕ್ಟಾಕ್ ಸ್ಟಾರ್ ಅಮ್ರೀನ್ ಭಟ್(35) ಳನ್ನು ಹತ್ಯೆ ಮಾಡಿದ್ದರು. ರಾತ್ರಿ 7.55ರ ಸುಮಾರಿಗೆ ಚಾದೂರದಲ್ಲಿರುವ ಭಟ್ ಅವರ ನಿವಾಸದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅವರ ಸಹೋದರ ಸಂಬಂಧಿ ಫರಾನ್ ಝಬೈರ್ ಕೂಡಾ ಗಾಯೊಂಡಿದ್ದರು. ಅಮ್ರೀನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಮ್ರೀನ್ ಮೃತಪಟ್ಟಿದ್ದರು.