ಅಯೋದ್ಯೆ ತೀರ್ಪು: ಮರುಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ : ಸುನ್ನಿ ವಕ್ಫ್ ಮಂಡಳಿ ಸ್ಪಷ್ಟನೆ…

341
firstsuddi

ನವದೆಹಲಿ : ಅಯೋಧ್ಯೆ ತೀರ್ಪು ವಿಚಾರಕ್ಕೆ ಸಂಬಂಧಿಸಿದಂತೆ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಸುನ್ನಿ ವಕ್ಫ್ ಮಂಡಳಿ ಸ್ಪಷ್ಟನೆ ನೀಡಿದೆ. ಇಂದು ಸುಪ್ರೀಂ ಕೋರ್ಟ್ ಅಯೋಧ್ಯೆ ತೀರ್ಪು ಪ್ರಕಟಗೊಳಿಸಿದ ಬೆನ್ನಲ್ಲೇ ಸುನ್ನಿ ವಕ್ಫ್ ಮಂಡಳಿ ಸುದ್ದಿಗೋಷ್ಟಿ ನಡೆಸಿ ಸುಪ್ರೀಂ ಆದೇಶವನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದು ತಿಳಿಸಿತ್ತು. ಆದರೆ ಇದೀಗಾ ಸುಪ್ರೀಂ ಆದೇಶವನ್ನು ನಾವು ಗೌರವಿಸುತ್ತೇವೆ. ಈ ತೀರ್ಪಿಗೆ ಸಂಬಂಧಿಸಿದಂತೆ ನಾವು ಯಾವುದೇ ಕಾರಣಕ್ಕೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸುವುದಿಲ್ಲ ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟನೆ ನೀಡಿದೆ.