ಅಯೋಧ್ಯೆ ತೀರ್ಪು ಏನೇ ಬಂದರೂ ಶಾಂತಿ ಮತ್ತು ಸೌಹಾರ್ಧತೆಯನ್ನು ಕಾಪಾಡೋಣ : ಸಿದ್ದರಾಮಯ್ಯ.

322
firstsuddi

ಬೆಂಗಳೂರು : ಇಂದು ಅಯೋಧ್ಯೆ ತೀರ್ಪು ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಪು ಏನೇ ಬಂದರೂ ಶಾಂತಿ ಮತ್ತು ಸೌಹಾರ್ಧತೆಯನ್ನು ಕಾಪಾಡೋಣ ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. “ರಾಮಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯದ ಸುಪ್ರೀಮ್ ಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ” ಎಂದು ಟ್ವೀಟ್ ಮಾಡಿದ್ದಾರೆ.