ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ– ಇಬ್ಬರು ಕಿಡಿಗೇಡಿಗಳ ಬಂಧನ…

42
firstsuddi

ಲಕ್ನೋ: ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಕಿಡಿಗೇಡಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್‍ನಿಂದ ಆರೋಪಿಗಳನ್ನು ವಿಶೇಷ ಪೊಲೀಸ್ ಪಡೆ ಬಂಧಿಸಿದೆ. ಆರೋಪಿಗಳು ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಎಸ್ ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಟ್ವಿಟರ್ ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು. ಬೆದರಿಕೆ ಬಂದ ಎಕ್ಸ್ ಖಾತೆ ಹಾಗೂ ಇಮೇಲ್ ಐಡಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಬಳಿಕ ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾನೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ.

ಎಸ್ ಟಿಎಫ್ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.