ಅರಣ್ಯ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ-ಕೃಷ್ಣಮೃಗ ಬೇಟೆಯಾಡುತ್ತಿದ್ದವರ ಬಂಧನ…

298
firstsuddi

ಕೊಪ್ಪಳ : ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಕೃಷ್ಣಮೃಗಗಳನ್ನು ಬೇಟೆಯಾಡಿ ಚರ್ಮ ಹಾಗೂ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ತಂಡವನ್ನು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹುಣಸಿಹಾಳ ಗ್ರಾಮದ ನಿವಾಸಿಗಳಾದ ತುಗ್ಲೆಪ್ಪ, ಶರಣಪ್ಪ ಚೌಹಾಣ, ಮಲ್ಲಯ್ಯ ಹಿರೇಮಠ, ಶಿವಯ್ಯ ಹಿರೇಮಠ, ಸಂಗಪ್ಪ ಕಟ್ಟಿಮನಿ, ಹನುಮಂತ ಕಟ್ಟಿಮನಿ ಬಂಧಿತ ಆರೋಪಿಗಳು. ಆರೋಪಿಗಳ ತಂಡ ಯಲಬುರ್ಗಾ ಭಾಗದ ಅರಣ್ಯ ಪ್ರದೇಶಗಳಲ್ಲಿ ಕೃಷ್ಣಮೃಗಗಳನ್ನು ಬೇಟೆಯಾಡಿ ಅದರ ಚರ್ಮ ಹಾಗೂ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ತಿಳಿದ ಅರಣ್ಯ ಇಲಾಖಾ ಅಧಿಕಾರಿಗಳು ಮಾರುವೇಷದಲ್ಲಿ ಹೋಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 20 ಕೃಷ್ಣಮೃಗ ಚರ್ಮ, 2 ಕೃಷ್ಣಮೃಗ ಟ್ರೋಪಿಯುಳ್ಳ ಕೊಂಬು, ಒಂದು ಜಿಂಕೆ ಮರಿ, ಮೂರು ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.