ಅರಣ್ಯ ನಿಯಮ ಉಲ್ಲಂಘನೆ ಆರೋಪ; ಕಾಂತಾರ ತಂಡಕ್ಕೆ ಬಿಗ್ ರಿಲೀಫ್.

48

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ: ಚಾಪ್ಟರ್ 1 ಚಿತ್ರದ ಚಿತ್ರೀಕರಣದ ವೇಳೆ ಇತ್ತೀಚೆಗೆ ಚಿತ್ರತಂಡದ ವಿರುದ್ಧ ಅರಣ್ಯ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ರಿಷಬ್ ಶೆಟ್ಟಿ, ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ: ಚಾಪ್ಟರ್ 1 ಚಿತ್ರ ಶೂಟಿಂಗ್ ಹಂತದಲ್ಲಿ ಇರುವಾಗಲೇ ಸಾಕಷ್ಟು ವಿವಾದ ಮಾಡಿಕೊಂಡಿದೆ. ಶೂಟಿಂಗ್ ವೇಳೆ ಕಾಡಿನಲ್ಲಿ ಬೆಂಕಿ ಹಚ್ಚಿ ಸಾಕಷ್ಟು ಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ತಂಡಕ್ಕೆ ಸಂಪೂರ್ಣ ಕ್ಲೀನ್ ಚಿಟ್ ಸಿಕ್ಕಿದೆ. ಇದರಿಂದ ಸಿನಿಮಾ ತಂಡ ನಿರಾಳ ಆಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮದ ಸಮೀಪ ಇರುವ ಗವಿಗುಡ್ಡ ಪ್ರದೇಶದ ಡೀಮ್ಡ್ ಅರಣ್ಯ ಹಾಗು ಗೋಮಾಳ ಜಮೀನಿನಲ್ಲಿ ಚಿತ್ರೀಕರಣ ಮಾಡಲು ಕಾಂತಾರ ತಂಡ ಅನುಮತಿ ಪಡೆದಿಕೊಂಡಿತ್ತು. ತಂಡದವರು ಅಕ್ರಮವಾಗಿ ಮರಕಡಿದು, ಸ್ಫೋಟಕ ಬಳಸಿ, ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಕೆಲ ಸ್ಥಳೀಯರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅರಣ್ಯಾಧಿಕಾರಿಗಳ ತಂಡ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ. ಜ.4ರಂದು ಅನುಮತಿ ಪಡೆಯದೆ ಡೀಮ್ಡ್ ಅರಣ್ಯದಲ್ಲಿ ಶೂಟಿಂಗ್ ಪರಿಕರ ತಂದ ಆರೋಪದಲ್ಲಿ 50 ಸಾವಿರ ದಂಡ ವಿಧಿಸಲಾಗಿತ್ತು. ಮರಗಳನ್ನು ಕಡಿದಿಲ್ಲ, ಮರದಂತೆ ಪೇಂಟ್ ಮಾಡಿದ ವಸ್ತುಗಳನ್ನು ಬಳಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಕಾಂತಾರ ಸಿನಿಮಾ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.