ಇಟಾನಗರ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದ ಹೊಳ್ಳಂಗಿಯಲ್ಲಿ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ.
ಅರುಣಾಚಲ ಪ್ರದೇಶದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವಂತೆ ವಿಮಾನ ನಿಲ್ದಾಣಕ್ಕೆ ದೋನಿ ಪೋಲೋ ವಿಮಾನ ನಿಲ್ದಾಣ ಎಂದು ಹೆಸರಿಡಲಾಗಿದೆ. ಸ್ಥಳೀಯ ಭಾಷೆಯಲ್ಲಿ ದೋನಿ ಎಂದರೆ ಸೂರ್ಯ ಮತ್ತು ಪೋಲೋ ಎಂದರೆ ಚಂದ್ರ ಎನ್ನಲಾಗಿದೆ.
640 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ವಿಮಾನ ನಿಲ್ದಾಣವು ಸಂಪರ್ಕವನ್ನು ಹೆಚ್ಚಿಸಲು ಮತ್ತು ಈ ಪ್ರದೇಶದಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
ವರದಿಗಳ ಪ್ರಕಾರ, ಹೊಳ್ಳಂಗಿಯಲ್ಲಿ 955 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಟರ್ಮಿನಲ್ 4,100 ಚದರ ಮೀ. ವಿಸ್ತೀರ್ಣವನ್ನು ಹೊಂದಿದೆ. ಇದು ಗಂಟೆಗೆ 200 ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.










