ಅರ್ಪಿತಾ ಮುಖರ್ಜಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಮುಂದಾದ ಇಡಿ.

73
firstsuddi

ಕೋಲ್ಕತ್ತಾ: ಅಮಾನತುಗೊಂಡಿರುವ ಟಿಎಂಸಿ ನಾಯಕ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮೂರು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದೆ.

ಇನ್ನು ಆ ಖಾತೆಗಳಲ್ಲಿ ಕನಿಷ್ಠ ಎರಡು ಕೋಟಿ ರೂ. ಪತ್ತೆಯಾಗಿದೆ ಎಂದು ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮುಖರ್ಜಿ ಹಲವಾರು ಶೆಲ್ ಕಂಪನಿಗಳಿಗೆ ಸೇರಿದ ಬ್ಯಾಂಕ್ ಖಾತೆಗಳು ಇಡಿ ಸ್ಕ್ಯಾನರ್ ಅಡಿಯಲ್ಲಿವೆ. ಮುಖರ್ಜಿಯ ಮೂರು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಖಾತೆಗಳಲ್ಲಿ ಒಟ್ಟು 2 ಕೋಟಿ ರೂ. ಪತ್ತೆಯಾಗಿದೆ. ಈ ಖಾತೆಗಳನ್ನು ಹಲವಾರು ವಹಿವಾಟುಗಳನ್ನು ನಡೆಸಲು ಬಳಸಲಾಗಿದೆ ಎಂದು ಅನುಮಾನ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಖಾತೆಯಿಂದ ಪಡೆದ ಹಣದ ಮೊತ್ತವನ್ನು ಬಹಿರಂಗಪಡಿಸದ ಅಧಿಕಾರಿಯೂ, ನಕಲಿ ಕಂಪನಿಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.

ನಾವು ಸಂಬಂಧಪಟ್ಟ ಅಧಿಕಾರಿಗಳಿಂದ ಈ ಬ್ಯಾಂಕ್ ಖಾತೆಗಳ ವಿವರಗಳನ್ನು ಕೇಳಿದ್ದೇವೆ. ಖಾತೆಗಳನ್ನು ಪರಿಶೀಲಿಸಿದ ನಂತರ, ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರ ಎರಡು ಫ್ಲಾಟ್ ಗಳಿಂದ 50 ಕೋಟಿ ರೂಪಾಯಿ ಮೌಲ್ಯದ ನಗದು ಜೊತೆಗೆ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿಯನ್ನು ಇಡಿ ವಶಪಡಿಸಿಕೊಂಡಿದೆ.