ಅಲ್ ಖೈದಾ ಜೊತೆ ನಂಟು ಶಂಕೆ – ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ…

34
firstsuddi

ಬೆಂಗಳೂರು : ಬೆಂಗಳೂರಿನ ಥಣಿಸಂದ್ರದ ಮಂಜುನಾಥ್ ನಗರದಲ್ಲಿ ಆಂತರಿಕ ಭದ್ರತಾ ವಿಭಾಗ(ಐಎಸ್​ಡಿ) ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಸಾಫ್ಟ್ ವೇರ್ ಇಂಜಿನಿಯರ್ ಆರೀಫ್ ಬಂಧಿತ ವ್ಯಕ್ತಿ. ಬಂಧಿತ ಶಂಕಿತ ಉಗ್ರ ಆರೀಫ್ ಅಲ್ ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಈತ ಕಳೆದ 2 ವರ್ಷಗಳಿಂದ ಅಲ್ ಖೈದಾ ಜೊತೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಟೆಲಿಗ್ರಾಮ್ ಹಾಗೂ ಡಾರ್ಕ್ ನೆಟ್ ಮೂಲಕ ಉಗ್ರ ಸಂಘಟನೆ ಆಲ್ ಖೈದಾ ಗ್ರೂಪ್ ಗಳಲ್ಲಿ ಸಕ್ರಿಯನಾಗಿದ್ದ ಎನ್ನಲಾಗುತ್ತಿದೆ. ಈತ ಮಾರ್ಚ್ ನಲ್ಲಿ ಇರಾಕ್ ಮೂಲಕ ಸಿರಿಯಾಗೆ ತೆರಳಲು ಯತ್ನಿಸಿದ್ದನಂತೆ. ಸದ್ಯ ಶಂಕಿತ ಆರೀಫ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.