ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಇಂದು ಬೆಂಗಳೂರಿನ ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ.

ಈ ಕುರಿತು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಅವರು, ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಪಯಣದಲ್ಲಿ ಜತೆ ನಿಂತ ಎಲ್ಲರಿಗೆ ಧನ್ಯವಾದ ಸಲ್ಲಿಸಿದ್ದಾರೆ.










