ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಭುಜದ ಮೇಲೆ ಹೊತ್ತು ಸಾಗಿದ ಮಹಿಳಾ ಇನ್ಸ್ ಪೆಕ್ಟರ್!

92
firstsuddi

ಚೆನ್ನೈ : ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಲ್ಲಿನ ಮಹಿಳಾ ಪೊಲೀಸ್ ಇನ್ಸ್‍ಪೆಕ್ಟರ್ ಒಬ್ಬರು ಮಳೆಯಿಂದ ನೆನೆದು ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸಿದ್ದಾರೆ.

ಕಿಲ್ಪಾಕ್ ಪ್ರದೇಶದ ಸ್ಮಶಾನದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವ್ಯಕ್ತಿಯೊಬ್ಬ ಅಸ್ವಸ್ಥನಾಗಿ ಬಿದ್ದಿದ್ದ. ಇದನ್ನು ಗಮನಿಸಿದ ಟಿಪಿ ಛತ್ರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ತಕ್ಷಣವೇ ಆತನನ್ನು ತಮ್ಮ ಭುಜದ ಮೇಲೆ ಹೊತ್ತು ಆಟೋ ಹತ್ತಿಸಿ, ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ದೃಶ್ಯದ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ವ್ಯಕ್ತಿಯ ಜೀವ ಉಳಿಸಿದ ಮಹಿಳಾ ಪೊಲೀಸ್ ಶೌರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಚೆನ್ನೈ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಯಾಗಿದೆ. ಈಗಾಗಲೇ 12 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ  ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.