ಅಹಮದಾಬಾದ್‍ನಲ್ಲಿ ಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ 10 ಮಂದಿ ಸಾವು…

68
firstsuddi

ಗಾಂಧಿನಗರ: ಲಾರಿ ಹಾಗೂ ಮಿನಿ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್‍ನ ಅಹಮದಾಬಾದ್-ಬಗೋದರ ಹೆದ್ದಾರಿಯಲ್ಲಿ ನಡೆದಿದೆ.

ಮೃತರೆಲ್ಲ ಚೋಟಿಲಾ ಕ್ಷೇತ್ರದ ದರ್ಶನ ಪಡೆದು ಮಿನಿ ಟ್ರಕ್‍ನಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ಟ್ರಕ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು ಹಾಗೂ ಇಬ್ಬರು ಪುರುಷರಿದ್ದಾರೆ ಎಂಬುದು ತಿಳಿದು ಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.