ಅ.1ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ…

78
firstsuddi

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ ಕೊಪ್ಪಳದ ಮಹಾವೀರ ಸಮುದಾಯ ಭವನದಲ್ಲಿ ಅ.1 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ವಾಸ್ತವ/ವರ್ಚುವಲ್ ವಿಧಾನದ ಮೂಲಕ ನಡೆಯಲಿರುವ ಈ ಸಭೆಯಲ್ಲಿ 2022ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ತಿಳಿಸಿದ್ದಾರೆ.

ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.