ಚಾಮರಾಜನಗರ : ಆಗಸ್ಟ್ 10ರೊಳಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇದೇ ಸೋಮವಾರ ಇಲ್ಲವೇ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ವರದಿ ನೀಡಲಿದ್ದು ಅದನ್ನಾಧರಿಸಿ ಫಲಿತಾಂಶ ಪ್ರಕಟಿಸುವ ಕುರಿತು ನಿರ್ಧರಿಸಲಾಗುತ್ತದೆ. ಖಾಸಗಿ ಶಾಲೆಗಳ ಕಳಕಳಿಯನ್ನು ಸಹ ಅರ್ಥ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ಅವರು ಹೇಳಿದರು.

ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ ಶಿಕ್ಷಣ ಸಚಿವರು
ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹೊಸಮಾಲಂಗಿ ಗ್ರಾಮದ ವಿದ್ಯಾರ್ಥಿನಿ ಶ್ವೇತಾ ಕೆಲ ತಿಂಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಳು. ಒಂದು ತಿಂಗಳ ಹಿಂದೆ ನಿಮ್ಹಾನ್ಸ್ ನಲ್ಲಿ ಬೆನ್ನು ಮೂಳೆಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಛಲ ಬಿಡದ ಶ್ವೇತಾ, ಪರೀಕ್ಷೆ ಬರೆದಿದ್ದಾಳೆ. ಈ ಹಿನ್ನೆಲೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಬಾಲಕಿಯ ಯೋಗ ಕ್ಷೇಮ ವಿಚಾರಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಶಾಸಕ ಎನ್.ಮಹೇಶ್ ಅನಾರೊಗ್ಯದಿಂದ ಬಳಲುತ್ತಿದ್ದರೂ ದಿಟ್ಟತನದಿಂದ ಪರೀಕ್ಷೆ ಎದುರಿಸಿರುವುದಕ್ಕೆ ಸಚಿವರು ಪ್ರಶಂಸಿದ್ದಾರೆ.










