ಆಗಸ್ಟ್ 28 ರಂದು ಮೂಡಿಗೆರೆ ತಾಲೂಕು ದಸರಾ ಕ್ರೀಡಾಕೂಟ

90

ಚಿಕ್ಕಮಗಳೂರು,: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೂಡಿಗೆರೆತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಮೂಡಿಗೆರೆ ಸ್ಪರ‍್ಟ್ಸ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವು ಅಲ್ಲಿನ ಹೊಯ್ಸಳ ಕ್ರೀಡಾಂಗಣದಲ್ಲಿ ಆಗಸ್ಟ್ 28 ರಂದು ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಾನ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರು ಉದ್ಘಾಟಿಸುವರು. ವಿಧಾನ ಪರಿಷತ್ ಮಾನ್ಯ ಉಪಸಭಾಪತಿ ಶ್ರೀ ಎಂ.ಕೆ.ಪ್ರಾಣೇಶ್, ರ‍್ನಾಟಕ ನವೀಕರಿಸಬಹುದಾದಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರಾದಡಾ.ಆರತಿ ಕೃಷ್ಣ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಅಧ್ಯಕ್ಷರಾದ ಎಂ.ಶ್ರೀನಿವಾಸ್ ಭಾಗವಹಿಸಲಿದ್ದಾರೆ.ಮೂಡಿಗೆರೆ ಕ್ಷೇತ್ರದ ಶಾಸಕರಾದ ನಯನ ಮೋಟಮ್ಮ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭೆ ಸದಸ್ಯರಾದ ಜೈರಾಮ್ರ ರಮೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ.ಪಟೇಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ,ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಟಿ.ರವಿ, ಡಾ.ಧನಂಜಯ ,ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್,ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಕೆ.ವೆಂಕಟೇಶ್ ಸೇರಿದಂತೆ  ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ