ನವದೆಹಲಿ : ಜುಲೈ 31ರವರೆಗೆ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲಿನ ನಿರ್ಬಂಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಘೋಷಿಸಿದೆ.
ಇದು ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದ್ದು, ಅಧಿಕಾರಿಗಳ ಅನುಮತಿಯೊಂದಿಗೆ ಆಯ್ದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣವನ್ನು ಅನುಮತಿಸಲಾಗುವುದು ಎಂದು ಡಿಜಿಸಿಎ ತಿಳಿಸಿದೆ. ವಂದೇ ಭಾರತ್ ಮಿಷನ್ ಅಡಿ ಆಯ್ದ ದೇಶಗಳಿಗೆ ಮಾತ್ರ ವಿಮಾನ ಸೇವೆ ನೀಡಲಾಗುತ್ತಿದೆ.
ಕೊರೊನಾ ಹರಡುತ್ತಿರುವ ಹಿನ್ನಲೆ ಕಳೆದ ವರ್ಷ ಮಾರ್ಚ್ 23 ರಿಂದ ಡಿಜಿಸಿಎ ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಿತ್ತು.










