ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಇಂಗು ಗುಂಡಿಯಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಸಾವು…

222
firstsuddi

ಭಟ್ಕಳ : ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಇಂಗು ಗುಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೊರಟೆಯಲ್ಲಿ ನಡೆದಿದೆ. ಮೃತ ಮಗುವನ್ನು ಸಾನವಿ ಮಂಜು ನಾಯ್ಕ್ ಎಂದು ಗುರುತಿಸಲಾಗಿದೆ. ಮೃತ ಮಗು ಮನೆಯಲ್ಲಿ ಒಬ್ಬಳೇ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೃಷಿಗಾಗಿ ತೋಡಲಾಗಿದ್ದ ಇಂಗು ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.