ಆಟೋ-ಟ್ರ್ಯಾಕ್ಟರ್‌ ಮಧ್ಯೆ ಭೀಕರ ಅಪಘಾತ – ಐವರು ಭಾರತೀಯ ವಿದ್ಯಾರ್ಥಿಗಳ ಸಾವು…

81
firstsuddi

ಟೊರಾಂಟೋ : ಕೆನಡಾದ ಟೊರಾಂಟೋದಲ್ಲಿ ಆಟೋ-ಟ್ರ್ಯಾಕ್ಟರ್‌ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಹಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರನ್ಪಾಲ್ ಸಿಂಗ್, ಮೋಹಿತ್ ಚವ್ಹಾಣ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ.

ಭೀಕರ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಸ್ನೇಹಿತರ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಟೊರಾಂಟೋದಲ್ಲಿನ ಭಾರತದ ಹೈಕಮೀಷನರ್ ಅಜಯ್ ಬಿಸಾರಿಯಾ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.