ತುಮಕೂರು : ಕಾಂಗ್ರೆಸ್‍ನ ಮಾಜಿ ಶಾಸಕ ಕೆ.ಎಸ್. ರಾಜಣ್ಣ ಅವರು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೊರಟೆಗೆರೆ ತಾಲ್ಲೂಕಿನ ಎಲೆರಾಂಪುರದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆ ಪುಣ್ಯಾತ್ಮನಿಗೆ ಕಷ್ಟದಲ್ಲಿದ್ದಾಗ ಸಹಾಯ ಮಾಡಿ ಶಾಸಕನಾಗಿ ಮಾಡಿದ್ದೆ. ಆದರೆ ಆತ ಗೆದ್ದು ಶಾಸಕನಾಗಿ ಡಿಸಿಎಂ ಆದ. ಹಿಂದೂ ಮುಂದೂ ಪೊಲೀಸರನ್ನು ಇಟ್ಟುಕೊಂಡು ಝೀರೋ ಟ್ರಾಫಿಕ್‍ನಲ್ಲಿ ತಿರುಗಾಡಿದ. ಈಗಾ ಅಧಿಕಾರ ಇಲ್ಲದೇ ಪರಿಸ್ಥಿತಿ ಹೇಗಾಗಿದೆ ನೋಡಿ. ಪೊಲೀಸರು ಹಿಂದೂ ಇಲ್ಲ ಮುಂದೂ ಇಲ್ಲ. ನೊಣ ಹೊಡಿಯೋರು ಯಾರೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಝೀರೋ ಟ್ರಾಫಿಕ್ ಮತ್ತು ನಾನು ಕ್ಲಾಸ್ ಮೇಟ್ಸ್. ಒಂದೇ ಬೇಂಚ್‍ನಲ್ಲಿ ಕುಳಿತು ಕಲಿತವರು. ಹಾಗಾಗಿ ಅವನನ್ನು ಕೊರಟಗೆರೆಯಿಂದ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿ ಗೆಲ್ಲಿಸಿಕೊಂಡು ಬಂದೆ. ಆತನಿಗೆ ಉಪಕಾರ ಸ್ಮರಣೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.










