ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧಿಸಿದ ಮುಂಬೈ ಪೊಲೀಸರು…

157
firstsuddi

ಮುಂಬೈ: ಬುಧವಾರ ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಹಠಾತ್ ಬೆಳವಣಿಗೆಯಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ಇಂದು ಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಲು ಯತ್ನಿಸಿದರು.