ಆತ್ಮಹತ್ಯೆಗೆ ಶರಣಾದ ಕಂದಾಯ ಅಧಿಕಾರಿ…

65
firstsuddi

ಬಳ್ಳಾರಿ : ಕಂದಾಯ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಸದಾಶಿವ ನಗರದಲ್ಲಿ ನಡೆದಿದೆ. ಚೈತ್ರಾ (25) ಮೃತ ಕಂದಾಯ ಅಧಿಕಾರಿ.

ಕೊಪ್ಪಳ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚೈತ್ರಾ ಜಿಲ್ಲೆಯ ಸಿರಗುಪ್ಪದಲ್ಲಿ ಗಂಡನ ಜೊತೆಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ ಗಂಡನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚೈತ್ರಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.