ಬೆಂಗಳೂರು : ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಸಾವಿಗೂ ಮುನ್ನ ಡೇತ್ ನೋಟ್ ಬರೆದಿದ್ದು, ‘ಅಮ್ಮ-ಅಮ್ಮ ನನ್ನನ್ನು ಕ್ಷಮಿಸಿ. ಸದ್ಯ ನನ್ನ ಮನಸ್ಥಿತಿ ಸರಿ ಇಲ್ಲ. ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ಆತ್ಮಹತ್ಯೆ ಮಾಡಿಕೊಳ್ಳಲು ತಮಗೆ ಇಷ್ಟವಿಲ್ಲದಿದ್ದರೂ ಬೇರೆ ದಾರಿ ತೋಚುತ್ತಿಲ್ಲ, ದಯವಿಟ್ಟು ಕ್ಷಮಿಸಿ ಎಂದಿರುವ ಅವರು, ಸ್ನೇಹಿತರು ಮತ್ತು ಸಹೋದರರ ಹೆಸರನ್ನೂ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಸೌಜನ್ಯ ಮೂಲತಃ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದು, ಕನ್ನಡದ ಚೌಕಟ್ಟು, ಫನ್ ಎಂಬ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.










