ಆತ್ಮಹತ್ಯೆಗೆ ಶರಣಾದ ನಾಲ್ಕನೇ ತರಗತಿ ವಿದ್ಯಾರ್ಥಿ…

121
firstsuddi

ಚಿಕ್ಕಮಗಳೂರು : ಅಪ್ಪನ ಜೊತೆ ಜಗಳವಾಡಿ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ.

ಗಣೇಶ್ ಹಾಗೂ ಶೋಭಾ ಅವರ ಪುತ್ರ ಚೇತನ್(9) ಮೃತ ಬಾಲಕ. ಪೋಷಕರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಶೇಷಗಿರಿ ಗ್ರಾಮದವರು. ಕಳೆದ ನಾಲ್ಕೈದು ವರ್ಷಗಳ ಹಿಂದೆ ಇಬ್ಬರು ಗಂಡು ಮಕ್ಕಳೊಂದಿಗೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ಕಾಫಿತೋಟಗಳಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು.

ಮೃತ ಬಾಲಕ ತುಸು ಸಿಟ್ಟಿನ ಸ್ವಭಾವದವನಾಗಿದ್ದು, ಆಗಾಗ ಕೆಲ ವಿಚಾರಗಳಿಗೆ ಅಪ್ಪ-ಅಮ್ಮನ ಜೊತೆ ಜಗಳವಾಡುತ್ತಿದ್ದನು. ಕಳೆದ ನಾಲ್ಕು ದಿನಗಳ ಹಿಂದೆ ರಾಣೆಬೆನ್ನೂರಿನಲ್ಲಿ ಜಾತ್ರೆ ಇದ್ದ ಕಾರಣ ಕುಟುಂಬ ಅಲ್ಲಿಗೆ ತೆರಳಿತ್ತು. ಈ ವೇಳೆ ಅಪ್ಪನ ಜೊತೆ ಜಗಳವಾಡಿಕೊಂಡು ಬಾಲಕ ಮನೆಯಲ್ಲಿದ್ದ ಜೋಕಾಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.