ಆದಷ್ಟು ಬೇಗ ಉಕ್ರೇನ್ ತೊರೆಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ…

43
firstsuddi

ಕೀವ್ : ಉಕ್ರೇನ್ ಮೇಲೆ ರಷ್ಯಾ ನಿರಂತರವಾಗಿ ದಾಳಿ ನಡೆಸುತ್ತಿದೆ. ಅಲ್ಲಿನ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರಿಗೆ ಉಕ್ರೇನ್ ನಿಂದ ಬೇಗನೆ ಹೊರಹೋಗುವಂತೆ ರಾಯಭಾರ ಕಚೇರಿ ಸೂಚನೆ ನೀಡಿದೆ.

ಉಕ್ರೇನ್ ನಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ದ್ವೇಷದ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆಗಳು ಉಕ್ರೇನ್ ಗೆ ಪ್ರಯಾಣಿಸದಂತೆ ಸೂಚಿಸಲಾಗಿದೆ ಎಂದು ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ತಿಳಿಸಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬುಧವಾರ ಉಕ್ರೇನ್ ನ ಲುಹಾನ್ಸ್ಕ್, ಡೊನೆಟ್ಕ್ಸ್, ಜಪೋರಿಜ್ಜ್ಯಾ, ಮತ್ತು ಖೆರ್ಸನ್ ಪ್ರದೇಶಗಳಲ್ಲಿ ಸಮರ ಕಾನೂನನ್ನು ಘೋಷಿಸಿದ್ದರು. ಅವರ ಆದೇಶವು ಇಂದು ಜಾರಿಗೆ ಬರಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ. ಎರಡು ದೇಶಗಳ ನಡುವಿನ ಸಂಘರ್ಷದಿಂದ ಸಾವಿರಾರು ಜನರು ಮೃತಪಟ್ಟಿದ್ದಾರೆ. ಈ ಯುದ್ಧ ಜಾಗತಿಕ ಆರ್ಥಿಕತೆಯನ್ನು ಅಲುಗಾಡಿಸಿದೆ.