ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ; ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ…

101
firstsuddi

ಬೆಂಗಳೂರು : ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಬೆಳಂಬೆಳಗ್ಗೆ ಐಟಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದಡಿ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಹೊಸ ಮನೆ ಹಾಗೂ ಅವರ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ನಡೆದಿದೆ.

ಇನ್ನು ಚಾಮರಾಜಪೇಟೆಯಲ್ಲಿರೋ ಜಮೀರ್ ಅಹ್ಮದ್ ಆಫೀಸ್ ಮೇಲೂ ದಾಳಿ ನಡೆಯುವ ಸಾಧ್ಯತೆ ಇದ್ದು, ಸದ್ಯ ಕಚೇರಿ ಕ್ಲೋಸ್ ಆಗಿದೆ. ಬೆಂಗಳೂರು ಮತ್ತು ದೆಹಲಿಯ ನಾಲ್ಕು ತಂಡಗಳು ದಾಳಿ ನಡೆಸಿ, ಶೋಧ ಕಾರ್ಯದಲ್ಲಿ ತೊಡಗಿವೆ.