ಬೆಂಗಳೂರು : ಆದಾಯ ತೆರಿಗೆ ವಂಚನೆ ಹಿನ್ನೆಲೆ ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇತರ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 50 ವಾಹನಗಳಲ್ಲಿ 10 ಅಧಿಕಾರಿಗಳನ್ನೊಳಗೊಂಡ 5 ತಂಡಗಳಿಂದ ಏಕಕಾಲಕ್ಕೆ ದಾಳಿಯಾಗಿದ್ದು, ಅಧಿಕಾರಿಗಳು ಶೋಭಾ ಡೆವಲಪರ್ಸ್ ಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಐಟಿ ದಾಳಿ ಹಿನ್ನಲೆ ಶೋಭಾ ಡೆವಲಪರ್ಸ್ ಮುಖ್ಯ ಕಚೇರಿಯಲ್ಲಿ ಇಂದಿನ ಕೆಲಸ ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಯಾವುದೇ ನೌಕರರನ್ನ ಹೊರಗೆ ಹೋಗದಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ.










