ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್…

42
firstsuddi

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಫೆಬ್ರವರಿ 24ರವರೆಗೆ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಫೆಬ್ರವರಿ 24ರ ಒಳಗೆ ತನಿಖಾಧಿಕಾರಿ ತನಿಖೆಯ ಪ್ರಗತಿ ವರದಿ ಸಲ್ಲಿಸಲಿ. ಅಲ್ಲಿಯವರೆಗೆ ತನಿಖೆ ಮುಂದುವರಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಿಬಿಐ ಅಧಿಕಾರಿಗಳು ಪದೇ ಪದೇ ನೋಟಿಸ್ ನೀಡುತ್ತಿದ್ದಾರೆ. ಹೆಂಡತಿ, ಮಗಳಿಗೆ ನೋಟಿಸ್ ನೀಡುವ ಮೂಲಕ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದರು.

ತಮ್ಮ ವಿರುದ್ಧದ ಕೇಸ್ ನ ತನಿಖೆಗೆ ಮಧ್ಯಂತರ ತಡೆಯಾಜ್ಞೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನನ್ನ ವಿರುದ್ಧ 40 ಕೇಸ್ ವಿಚಾರಣೆ ನಡೆಯುತ್ತಿದೆ. ಇದರಲ್ಲಿ ಯಾವುದು ಎಂದು ವಕೀಲರ ಜೊತೆಗೆ ಮಾತನಾಡುತ್ತೇನೆ. ಕೇಸ್ ನ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದು ಬಹಳ ಸಂತೋಷವಾಗಿದೆ. ಕೋರ್ಟ್ ಮೇಲೆ, ನ್ಯಾಯದ ಮೇಲೆ ನನಗೆ ನಂಬಿಕೆ ಇದೆ ಎಂದರು.