ಆಪರೇಷನ್ ಕಮಲ ಪ್ರಕರಣ; ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು…

126
Firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆಪರೇಷನ್ ಕಮಲಕ್ಕಾಗಿ ಹಣದ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ಇಂದು ಅನುಮತಿ ನೀಡಿದೆ.

ಜೆಡಿಎಸ್ ಬಿಟ್ಟು ಬಿಜೆಪಿಗೆ ಬರಲು ಹಣದ ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ಪಾಟೀಲ್ ಅವರು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆದರೆ ಎಫ್ಐಆರ್ ಗೆ ತಡೆ ಕೋರಿ ಯಡಿಯೂರಪ್ಪನವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದ್ದು, ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ತನಿಖೆಗೆ ಅಸ್ತು ಎಂದು ಆದೇಶ ಹೊರಡಿಸಿದೆ.