ಕೌಟುಂಬಿಕ ಕಲಹ ; ಆರು ಮಕ್ಕಳನ್ನು ಬಾವಿಗೆ ಎಸೆದ ಪಾಪಿ ತಾಯಿ!

60
firstsuddi

ಮುಂಬೈ : ಮಹಿಳೆಯೊಬ್ಬಳು ತನ್ನ ಐವರು ಪುತ್ರಿಯರನ್ನು ಸೇರಿದಂತೆ ಆರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾಳೆ. ಮುಂಬೈನಿಂದ ಸುಮಾರು 100 ಕಿಮೀ ದೂರದಲ್ಲಿರುವ ಮಹಾಡ್ ತಾಲೂಕಿನ ಖರಾವಲಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಇನ್ನು ನೀರಿನಲ್ಲಿ ಮುಳುಗಿ ಮೃತಪಟ್ಟ ಎಲ್ಲಾ ಮಕ್ಕಳು 18 ತಿಂಗಳಿಂದ 10 ವರ್ಷದೊಳಗಿನವರಾಗಿದ್ದಾರೆ ಎನ್ನಲಾಗಿದೆ.

ತಾಯಿಯೇ ಈ ರೀತಿ ತನ್ನ 6 ಪುಟ್ಟ ಪುಟ್ಟ ಮಕ್ಕಳನ್ನು ಕೊಲ್ಲಲು ಕೌಟುಂಬಿಕ ಕಲಹ ಕಾರಣ ಎನ್ನಲಾಗುತ್ತಿದೆ. ಇತ್ತೀಚಿಗಷ್ಟೇ ಗಂಡ ಈಕೆಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದ. ಆತನ ಕುಟುಂಬಸ್ಥರೂ ಕೂಡ ಈಕೆಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ನೊಂದಿದ್ದ ಮಹಿಳೆ ಇಂತಹ ನಿರ್ಧಾರ ತೆಗೆದುಕೊಂಡಿದ್ದಾಳೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಆರು ಮಕ್ಕಳ ಶವಗಳನ್ನು ಬಾವಿಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಮಹಿಳೆಯನ್ನು ವಿಚಾರಣೆ ನಡೆಸಲಾಗುತ್ತಿದೆ.