ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದ ಸಚಿವ ಬಿ.ಸಿ.ನಾಗೇಶ್.

70
firstsuddi

ಬೆಂಗಳೂರು : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ ಬೆನ್ನಲ್ಲೆ, ಇದೀಗ ಮತ್ತೆ ಕೊರೊನಾ ಏರಿಕೆಯಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ಹರಡುತ್ತಿದೆ. ಹೀಗಾಗಿ ಶಾಲೆಗಳಲ್ಲಿ ಯಾವೆಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು, ವಸತಿ ಶಾಲೆಗಳಿಗೆ ಯಾವೆಲ್ಲ ಮಾರ್ಗಸೂಚಿ ನೀಡಬೇಕು, ಎಸ್ಒಪಿ ಪರಿಷ್ಕರಣೆ ಹೇಗೆ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಪತ್ರ ಬರೆದಿದ್ದಾರೆ.

ಇನ್ನೂ ಶಾಲೆಗಳ ಮಾರ್ಗಸೂಚಿ ನಿರ್ವಹಣೆ ಬಗ್ಗೆ ಡಿಸೆಂಬರ್ 9ರಂದು ಸಿಎಂ ಜೊತೆ ಸಭೆ ನಡೆಸಲು ಶಿಕ್ಷಣ ಸಚಿವರು ಮುಂದಾಗಿದ್ದಾರೆ. ಈ ವೇಳೆ ತಾಂತ್ರಿಕ ಸಲಹಾ ಸಮಿತಿ ತಜ್ಞರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.