ಬೆಂಗಳೂರು : ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ(95) ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಳ್ಳಾರಿಯ ತಮ್ಮ ನಿವಾಸಕ್ಕೆ ತೆರಳಿದ್ದರು. ಬಳಿಕ ನಿನ್ನೆ ರಾತ್ರಿ ಆರೋಗ್ಯದಲ್ಲಿ ಬದಲಾವಣೆಯಾಗಿದ್ದು, ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದು, ಇಂದು ಬೆಳಿಗ್ಗೆ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ.
ತಾಯಿ ಮೃತಪಟ್ಟಿರುವ ಕುರಿತು ಸ್ವತಃ ಶ್ರೀರಾಮುಲು ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು, ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು ಎಂದು ಬರೆದುಕೊಂಡಿದ್ದಾರೆ.
ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ.
ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು. pic.twitter.com/D94Lzg5Do6
— B Sriramulu (@sriramulubjp) August 21, 2020










