ಆರ್ಯನ್ ಖಾನ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಕಿರಣ್ ಗೋಸಾವಿ ಬಂಧನ…

78
firstsuddi

ಮುಂಬೈ : ಡ್ರಗ್ಸ್ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಬಳಿಕ ನಾಪತ್ತೆಯಾಗಿದ್ದ ಕಿರಣ್ ಗೋಸಾವಿಯನ್ನು ಪೊಲೀಸರು ಇಂದು ಪುಣೆಯಲ್ಲಿ ಬಂಧಿಸಿದ್ದಾರೆ.

ಮೂರು ದಿನಗಳ ಹಿಂದೆ ಉತ್ತರ ಪ್ರದೇಶದ ರಾಜಧಾನಿ ಲಖನೌ ಪೊಲೀಸರಿಗೆ ಶರಣಾಗುವುದಾಗಿ ಹೇಳಿಕೆ ನೀಡಿದ್ದ. ಇದರ ಬೆನ್ನಲ್ಲೇ ಇದೀಗ ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ಸ್ವತಂತ್ರ ಸಾಕ್ಷಿಯಾಗಿರುವ ಕಿರಣ್ ಗೋಸಾವಿಯನ್ನು ಪುಣೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಲೇಷಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಗೆ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿತ್ತು. ಹೀಗಾಗಿ ಕಿರಣ್ ವಿರುದ್ಧ 2018ರಂದು ಪುಣೆಯ ಫರಸ್ಕನ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು.

ಅಲ್ಲದೇ ಖಾಸಗಿ ತನಿಖಾಧಿಕಾರಿ ಆಗಿರುವ ಕಿರಣ್ ಗೋಸಾವಿ ಶಾರೂಖ್ ಖಾನ್ ಮ್ಯಾನೇಜರ್ ನನ್ನೂ ಭೇಟಿಯಾಗಿದ್ದು, ಎನ್ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಎದುರಲ್ಲೇ 9ರಿಂದ 10 ಪುಟಗಳಷ್ಟು ಖಾಲಿ ಹಾಳೆಗಳಿಗೆ ಸಹಿ ಹಾಕುವಂತೆ ಕೇಳಿದ್ದನ್ನು ನಾನು ನೋಡಿದ್ದೇನೆ ಎಂದು ಕಿರಣ್ ಗೋಸಾವಿಯ ಪರ್ಸನಲ್ ಬಾಡಿಗಾರ್ಡ್ ಪ್ರಭಾಕರ್ ಸೈಲ್ ಆರೋಪಿಸಿದ್ದಾರೆ.