ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆ ಮುಂದೂಡಿಕೆ – ಚಿತ್ರತಂಡದಿಂದ ಅಧಿಕೃತ ಘೋಷಣೆ…

82
firstsuddi

ಹೈದರಾಬಾದ್ : ಟಾಲಿವುಡ್ ನಟ ಜ್ಯೂನಿಯರ್ ಎನ್‍ಟಿಆರ್ ಹಾಗೂ ನಟ ರಾಮ್ ಚರಣ್ ತೇಜ ಅಭಿನಯದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ನಮ್ಮ ನಿರಂತರ ಪ್ರಯತ್ನಗಳ ಹೊರತಾಗಿಯೂ, ಕೆಲವು ಸನ್ನಿವೇಶಗಳು ನಮ್ಮ ನಿಯಂತ್ರಣವನ್ನು ಮೀರಿದೆ. ಭಾರತದ ಅನೇಕ ರಾಜ್ಯಗಳು ಚಿತ್ರಮಂದಿರಗಳನ್ನು ಮುಚ್ಚುತ್ತಿರುವುದರಿಂದ, ನಿಮ್ಮ ಉತ್ಸಾಹವನ್ನು ಹಿಡಿದಿಟ್ಟುಕೊಳ್ಳಲು ಕೇಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲದಾಗಿದೆ. ನಾವು ಭಾರತೀಯ ಸಿನಿಮಾದ ವೈಭವವನ್ನು ಮರಳಿ ತರುವುದಾಗಿ ಭರವಸೆ ನೀಡುತ್ತಿದ್ದೇವೆ ಮತ್ತು ಸರಿಯಾದ ಸಮಯದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುತ್ತೇವೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

ಆರ್‌ಆರ್‌ಆರ್‌ ಸಿನಿಮಾ 2022ರ ಜನವರಿ 7ರಂದು ಐದು ಭಾಷೆಗಳಲ್ಲಿ ತೆರೆ ಕಾಣಬೇಕಾಗಿತ್ತು. ಆದರೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಇದೀಗ ಆರ್‌ಆರ್‌ಆರ್‌ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಇದರಿಂದ ಆದಷ್ಟು ಬೇಗ ಈ ಚಿತ್ರವನ್ನು ನೋಡಬೇಕು ಎಂದು ಕಾಯುತ್ತಿದ್ದ ಸಿನಿಪ್ರಿಯರಿಗೆ ನಿರಾಸೆ ಆಗಿದೆ.