ಅಥಣಿ(ಬೆಳಗಾವಿ) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಿನ್ನೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಇಂದು ಆರ್ ಎಸ್ ಎಸ್ ಹಿರಿಯ ಮುಖಂಡರ ಮನೆಗೆ ಭೇಟಿ ನೀಡಿದ್ದಾರೆ.
ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಆರ್ ಎಸ್ ಎಸ್ ಹಿರಿಯ ಮುಖಂಡರಾದ ಅರವಿಂದ್ ರಾವ್ ದೇಶಪಾಂಡೆ ಅವರ ನಿವಾಸಕ್ಕೆ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಇಂದು ಆರ್ ಎಸ್ ಎಸ್ ಹಿರಿಯ ಮುಖಂಡರ ಮನೆಗೆ ತೆರಳಿ ಭೇಟಿ ನೀಡಿರುವುದು ಕೂತೂಹಲಕ್ಕೆ ಕಾರಣವಾಗಿದೆ.
ಅಥಣಿಗೆ ಆಗಮಿಸಿದ ರಮೇಶ್ ಜಾರಕಿಹೊಳಿ ಅವರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಅರವಿಂದ್ ರಾವ್ ದೇಶಪಾಂಡೆ ಅವರ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.










