ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ತಡರಾತ್ರಿ 1.25ಕ್ಕೆ ಈ ಅವಘಡ ಸಂಭವಿಸಿದೆ, ಅಪಘಾತ ಸಂಭವಿಸಿದಾಗ ರೈಲು ನಿಲ್ದಾಣದ ಮೂರನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನಗಳು ಕೂಡಲೇ ಸ್ಥಳಕ್ಕೆ ತೆರಳಿದವು. ಮೂರು ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸಲು ಗಂಟೆಗಳ ಕಾಲ ಪ್ರಯತ್ನಿಸಿದರೂ ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಸ್ವಲ್ಪ ಸಮಯದ ನಂತರ ಬೆಂಕಿ ಹತೋಟಿಗೆ ತರಲಾಯಿತು.
ಕಣ್ಣೂರು ಅಗ್ನಿಶಾಮಕ ಠಾಣೆಯ ಅಧಿಕಾರಿಯೊಬ್ಬರು ಮಾತನಾಡಿ, ರೈಲಿನ ಹಿಂಬದಿಯಲ್ಲಿರುವ ಮೂರನೇ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ವಿಧಿವಿಜ್ಞಾನ ತನಿಖೆಯಿಂದ ಘಟನೆಗೆ ನಿಖರ ಕಾರಣ ಏನೆಂದು ತಿಳಿಯಲಿದೆ ಎಂದು ಹೇಳಿದರು.










