ಸಿಡ್ನಿ : ತ್ರಿವರ್ಣಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.
ಈ ವೀಡಿಯೋವನ್ನು ಬಿಜೆಪಿ ಮುಖಂಡ ಮಂಜಿಂದರ್ ಸಿಂಗ್ ಸಿರ್ಸಾ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಉಗ್ರರು ನಡೆಸುತ್ತಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ಖಂಡಿಸುತ್ತೇನೆ. ಈ ಚಟುವಟಿಕೆಗಳಿಂದ ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.
I strongly condemn anti India activities by pro Khalistani in Australia. Anti-social elements that are trying to disrupt the peace & harmony of the country with these activities, must be dealt with strongly and culprits must be brought to books.@ANI pic.twitter.com/xMMxNTQscc
— Manjinder Singh Sirsa (@mssirsa) January 29, 2023
ವೀಡಿಯೋದಲ್ಲಿ ಏನಿದೆ? : ಖಲಿಸ್ತಾನಿಗಳ ಗುಂಪೊಂದು ತ್ರಿವರ್ಣ ಧ್ವಜವನ್ನು ಹೊತ್ತ ಭಾರತೀಯರ ಮೇಲೆ ದಾಳಿ ನಡೆಸಿದೆ. ಅಷ್ಟೇ ಅಲ್ಲದೇ ಒಬ್ಬ ಖಲಿಸ್ತಾನಿ ವ್ಯಕ್ತಿ ಭಾರತೀಯ ಧ್ವಜವನ್ನು ಮುರಿದು ನೆಲದ ಮೇಲೆ ಎಸೆದಿದ್ದಾರೆ.
ಘಟನೆ ವೇಳೆ ಐವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯನ್ನು ಖಂಡಿಸಿರುವ ವಿಕ್ಟೋರಿಯಾ ಪೊಲೀಸರು, ಹಿಂಸಾತ್ಮಕ ದಾಳಿಯ ನಂತರ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.










