ಧಾರವಾಡ : ಜಮೀನಿಗಾಗಿ ತಂದೆ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಜಮ್ಮಿಹಾಳ ಗ್ರಾಮದಲ್ಲಿ ನಡೆದಿದೆ. ವೀರಭದ್ರಪ್ಪ ಸುತ್ತೂರು(40) ಹಾಗೂ ರವಿ ಸುತ್ತೂರು(25) ಮೃತ ದುರ್ದೈವಿಗಳು ಎನ್ನಲಾಗಿದ್ದು, ವೀರಭದ್ರಪ್ಪ ಅವರು ದೇವಲಿಂಗನಕೊಪ್ಪ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಗೂ ಕಲಘಟಗಿ ಪಿಎಲ್‍ಡಿ ಬ್ಯಾಂಕ್ ಸದಸ್ಯರಾಗಿದ್ದು, ಈ ಹಿಂದೆ ಜಮೀನು ಹಾಗೂ ದೇವಸ್ಥಾನದ ವಿಚಾರವಾಗಿ ಸುತ್ತೂರು ಹಾಗೂ ಅಕ್ಕಿ ಕುಟುಂಬಗಳ ನಡುವೆ ಜಗಳವಾಗಿದ್ದು, ಬಳಿಕ ನಿನ್ನೆ ರಾತ್ರಿ ಮತ್ತೆ ಎರಡು ಕುಟುಂಬಗಳ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ವೀರಭದ್ರಪ್ಪ ಅವರ ತಲೆಗೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕಲಘಟಗಿ ಠಾಣಾ ಪೊಲೀಸರು 17 ಮಂದಿ ಆರೋಪಿಗಳ ಪೈಕಿ 13 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.










