ಆಸ್ತಿ ಪತ್ರಕ್ಕೆ ಸಹಿ ಮಾಡಲು ಐಸಿಯುನಲ್ಲಿದ್ದ ವೃದ್ಧೆಯನ್ನು ಕಚೇರಿಗೆ ಕರೆತಂದ ಅಧಿಕಾರಿಗಳು!

51
firstsuddi

ಬೆಳಗಾವಿ : ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವ ವೃದ್ಧೆಯನ್ನು ಬೆಳಗಾವಿ ಉಪನೋಂದಣಾಧಿಕಾರಿಗಳು ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡ ಸಹಿ ಮಾಡಿಸಿಕೊಂಡಿರುವ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ. ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (80) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ತಿ ಹಂಚಿಕೆ ಸಂಬಂಧ ಹಕ್ಕುಪತ್ರಕ್ಕೆ ಹೆಬ್ಬೆಟ್ಟು ಒತ್ತಿ ಸಹಿ ಹಾಕಲು ಮಹಾದೇವಿ ಅಗಸಿಮನಿ ಬೆಳಗಾವಿಯ ಉಪನೋಂದಣಿ ಕಚೇರಿಗೆ ಆಗಮಿಸಬೇಕಿತ್ತು. ಅಜ್ಜಿ ಅನಾರೋಗ್ಯದಿಂದ ಐಸಿಯುನಲ್ಲಿದ್ದ ಕಾರಣಕ್ಕೆ ಉಪನೋಂದಣಿ ಅಧಿಕಾರಿಗೆ ಆಸ್ಪತ್ರೆಗೆ ಬರಲು ಕುಟುಂಬಸ್ಥರು ಮನವಿ ಮಾಡಿದ್ದರು.

ಆಸ್ಪತ್ರೆಗೆ ಬಂದು ವೃದ್ಧೆಯ ಹೆಬ್ಬೆಟ್ಟು ಒತ್ತಿಸಿ ಸಹಿ ಮಾಡಿಸಿಕೊಳ್ಳಲು ಉಪನೋಂದಣಾಧಿಕಾರಿ ಪದ್ಮನಾಭ್ ಗುಡಿ ಎರಡು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹಣ ನೀಡಲು ಒಪ್ಪದ ಕುಟುಂಬಸ್ಥರು ವೃದ್ಧೆಯನ್ನು ಸ್ಟ್ರೆಚರ್ ಮೇಲೆ ಕಚೇರಿಗೆ ಕರೆದುಕಂಡು ಬಂದಿದ್ದಾರೆ. ಇದೀಗ ಉಪನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.