ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯ…

239
firstsuddi

ಯಾದಗಿರಿ : ಗಂಡ-ಹೆಂಡತಿ ನಡುವೆ ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗುರಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ನರಸಮ್ಮ (40), ಮೃತ ದುರ್ಧೈವಿ ಹಾಗೂ ಆರೋಪಿ ಪತಿಯನ್ನು ಭೀಮಣ್ಣ ಎಂದು ಗುರುತಿಸಲಾಗಿದೆ. ಮೃತ ನರಸಮ್ಮ ಭೀಮಣ್ಣ ಅವರ ಎರಡನೇ ಪತ್ನಿಯಾಗಿದ್ದು, ಮೊದಲ ಪತ್ನಿ ಮೃತಪಟ್ಟಿದ್ದು, ಮೊದಲ ಪತ್ನಿಯ ನಾಲ್ಕು ಮಕ್ಕಳಿಗೆ ಆಸ್ತಿ ನೀಡುವ ವಿಚಾರವಾಗಿ ಇಬ್ಬರ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ನಿನ್ನೆ ರಾತ್ರಿಯೂ ಕೂಡಾ ಇಬ್ಬರ ನಡುವೆ ಇದೇ ವಿಚಾರವಾಗಿ ಜಗಳವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಭೀಮಣ್ಣ ನರಸಮ್ಮ ಅವರನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಗ್ರಾಮಸ್ಥರು ಆರೋಪಿ ಪತಿಯನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಗುರುಮಠಕಲ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.