ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ.

59
firstsuddi

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಸದ್ಯ ಚೇತರಿಸಿಕೊಳ್ಳುತ್ತಿರುವ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿಎಂ ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಜೊತೆಗಿದ್ದರು.

ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತೀಚೆಗೆ ಮಂಡಿಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಇದೇ ವೇಳೆ ಬೊಮ್ಮಾಯಿ ಹೃದಯ ಸಂಬಂಧ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.