ಬಹುಭಾಷಾ ನಟ ಕಮಲ್ ಹಾಸನ್ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಹೈದರಾಬಾದ್ ಗೆ ತೆರಳಿದ್ದ ಕಮಲ್ ಹಾಸನ್ ಸಂಜೆ ವೇಳೆಗೆ ಚೆನ್ನೈಗೆ ವಾಪಸ್ ಆಗಿದ್ದರು. ಈ ಸಂದರ್ಭದಲ್ಲಿ ಸ್ವಲ್ಪ ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆ ಚೆನ್ನೈನ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ. ವೈದ್ಯರ ಸಲಹೆಯಂತೆ ಇಂದು ಮಧ್ಯಾಹ್ನ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.
ಕಮಲ್ ಹಾಸನ್ ಸದ್ಯ ತಮಿಳಿನ ಬಿಗ್ ಬಾಸ್ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ನಿರ್ದೇಶಕ ಶಂಕರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ‘ಇಂಡಿಯನ್ 2’ ನಲ್ಲಿ ನಟಿಸುತ್ತಿದ್ದಾರೆ.










